ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆ: ಚೆಲುವನಹಳ್ಳಿ ನಾಗರಾಜ್, ಕೋಲಾರ: ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್ ತಿಳಿಸಿದರು. ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ತೊಡಗಿರುವ ಹಾಲು ಉತ್ಪಾದಕರಿಗೆ ಒಕ್ಕೂಟವು ಸೂಕ್ತ ಬೆ