ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕಾರ್ಯಗಾರವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಗಾರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್ಎಂ ರೇವಣ್ಣ,ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ ಸಿ ಸುಧಾಕರ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಲುವಹಳ್ಳಿ ರಮೇಶ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.