ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ಗೆ ಇಂದು ಅಂದರೆ ಮಂಗಳವಾರ ಗೊತ್ತಾಗಲಿದೆ. ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯುತ್ತಾರಾ ಅಥವಾ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ಎಂಬುದು ಇಂದು ಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ. ಭದ್ರತಾ ದೃಷ್ಟಿಯಿಂದ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂದು ಸರ್ಕಾರಿ ಪರ ವಕೀಲರು ಮಾಡಿರೋ ಮನವಿ ಅರ್ಜಿ ವಿಚಾರಣೆ ನಡೆಸಲಿದೆ. ಈಗಾಗಲೇ ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದು, ಟ್ರಯಲ್ ಅತೀ ಶೀಘ್ರದಲ್ಲೇ ಪ್ರಾರಂಭ ಆಗ್ತಾ ಇದೆ. ಹೀಗಾಗಿ, ಆರೋಪಿಯನ್ನು ಪದೇ ಪದೇ ಬಳ್ಳಾರಿಯಿಂದ ಕರೆತರಲು ಸಾಧ್ಯವಿಲ್ಲ. ಜೊತೆಗೆ ಆರೋಪಿ ತಾಯಿಗೆ ಮಾರಕ ಕ್ಯಾನ್ಸರ್ ಕಾಯಿಲೆ ಇದ್ದು, ಬಳ್ಳಾರಿಗೆ ಪ್