ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಕೆಳಕ್ಕುರುಳಿದ ಘಟನೆ ಬುಡೋಳಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆಳಕ್ಕುರುಳಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ 4 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇನ್ನೂ ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಾಣಿ ಸೋಷಿಯಲ್ ಇಕ್ವಾ ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಪಡೀಲ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.