ಲಾಲ್ ಬಾಗ್ ಕೆರೆಯಲ್ಲಿ ಶನಿವಾರ ಬೆಳಗ್ಗೆ 6:30 ರ ಸುಮಾರಿಗೆ ಅಪರಿಚಿತ ಶವ ಪತ್ತೆಯಾಗಿದೆ. ಸರಿಸುಮಾರು 45 ವರ್ಷ ಮಹಿಳೆಯ ಶವ ಎಂಬ ಮಾಹಿತಿ ಸಿಕ್ಕಿದ್ದು, ಸ್ಥಳೀಯ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.