ಕಲಘಟಗಿ ಪಟ್ಟಣದಲ್ಲಿ ನಿರ್ಮಿಸಲಾದ ನೂತನ ಇಂದಿರಾ ಕ್ಯಾಂಟೀನ್ ನ್ನು ಸಚಿವರಾದ ಸಂತೋಷ್ ಲಾಡ್ ಅವರು ಉದ್ಘಾಟಿಸಿದರು. ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರದ ಅತ್ಯಂತ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ಗಳು ರಾಜ್ಯದಾದ್ಯಂತ ಪ್ರತಿದಿನ ಲಕ್ಷಾಂತರ ಜನರ ಹಸಿವು ನೀಗಿಸುತ್ತಿವೆ. ಇಂದಿರಾ ಕ್ಯಾಂಟೀನ್ ಗಳ ಮೂಲಕ ಅತ್ಯಂತ ಕಡಿಮೆ ದರದಲ್ಲಿ ರುಚಿಯಾದ ಮತ್ತು ಶುಚಿಯಾದ ಆಹಾರಗಳನ್ನು ನೀಡಿ, ಬಡವರ ಹೊಟ್ಟೆ ತುಂಬಿಸುತ್ತಿರುವ ಕೈಂಕರ್ಯದಲ್ಲಿ ತೊಡಗಿರುವ ನಮ್ಮ ಸರ್ಕಾರದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂಬುದು ನನ್ನ ಪಾಲಿಗೆ ಎಂದೆಂದಿಗೂ ಹೆಮ್ಮೆಯ ವಿಷಯ ಎಂದರು. ಈ ವೇಳೆ ಜಿಲ್ಲಾಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.