ಧರ್ಮಸ್ಥಳ ಪ್ರಕರಣ ದಲ್ಲಿ SIT ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ. ಷಡ್ಯಂತ್ರಕ್ಕೆ ವಿದೇಶಿ ಫಂಡಿಂಗ್ ಶಂಕೆಯಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕ. ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.