ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ರದ್ದುಪಡಿಲು ಆಗ್ರಹಿಸಿ ದಾವಣಗೆರೆ ನಗರದಲ್ಲಿ ಬುಧವಾರ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಡೆಸಿದರು. 2025-26ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ಕರ್ನಾಟಕ ರಾಜ್ಯ ಸರ್ಕಾರವು ನಿರ್ಧರಿಸಿದ್ದು, ಶ್ರೀಮಂತ ಎನ್‌ಆರ್‌ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲುಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಅವಕಾಶವನ್ನು ಕಡಿತಗೊಳಿಸಿದಂತಾಗಿದೆ ಎಂದು ಎಐಡಿಎಸ್‌ಓ ಸಂಘಟನೆಯ ಪೂಜಾ ನಂದಿಹಳ್ಳಿ ಈ ವೇಳೆ ತಿಳಿಸಿದರು.