ಶ್ರೀರಂಗಪಟ್ಟಣ ತಾಲೂಕಿನ ಎಡಮುರಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ದುರ್ಮರಣ ಹೊಂದಿರುವ ಘಟನೆ ಜರುಗಿದೆ. ಶ್ರೀರಂಗಪಟ್ಟಣ ತಾಲೂಕಿನ ಎಡಮುರಿಯಲ್ಲಿ ಕಾವೇರಿ ನದಿಯ ವಾಟರ್ಪಾಲ್ನಲ್ಲಿ ಈಜಲು ಹೋಗಿದ್ದ ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ವಿದ್ಯಾಥರ್ಿಗಳಾದ 20 ವರ್ಷದ ಶ್ಯಾಮ್ ಮತ್ತು 21 ವರ್ಷದ ವೆಂಕಟೇಶ್ ಎಂಬುವವರೇ ಮುಳುಗಿ ಮೃತಪಟ್ಟ ದುದರ್ೈವಿ ಯುವಕರಾಗಿದ್ದಾರೆ. ಇವರು ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ನದಿಗೆ ಬಂದಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಕಾಯರ್ಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.