ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಗುರುಲಿಂಗಯ್ಯ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಷಯ ತಿಳಿದು ಜಿಲ್ಲಾಧಿಕಾರಿ ಶಿಲ್ಪಾನಾಗ್, ಸಿಇಒ ಮೋನಾ ರೋತ್ ಹಾಗೂ ಜಿಲ್ಲಾಡಳಿತ ಭವನದ ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.