ಜಿಲ್ಲೆಯ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಆಗಸ್ಟ್ 27 ರಿಂದ ಪ್ರಾರಂಭವಾಗುವ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಜಿಲ್ಲೆಯಲ್ಲಿ ಪ್ರತಿಷ್ಠಾಪಿಸಿ ವಿಸರ್ಜನೆ ಮಾಡುವ ಗಣೇಶ ಮೂರ್ತಿಗಳ ಅವಧಿಯನ್ನು ಆಗಸ್ಟ್ 27 ರಿಂದ ಸೆಪ್ಟೆಂಬರ್ 16 ರವರೆಗೆ 21 ದಿನಗಳವರೆಗೆ ಮಾತ್ರ ನಿಗದಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ದಾವಣಗೆರೆ ನಗರದಲ್ಲಿ ಗುರುವಾರ ಸಂಜೆ 4 ಗಂಟೆಗೆ ಪತ್ರಿಕಾ ಪ್ರಕಟಣೆ ಮೂಲಕ ಆದೇಶ ಹೊರಡಿಸಿದ್ದಾರೆ.