ಕಲಬುರಗಿ : ಶಿವಸೇನೆ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಕಲಬುರಗಿಗೆ ಆಂದೋಲ ಗ್ರಾಮದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಗಮಿಸಿದ್ದಾರೆ.. ಆಗಷ್ಟ್ 27 ರಂದು ಸಂಜೆ 5.30 ಕ್ಕೆ ಕಲಬುರಗಿಗೆ ಆಗಮಿಸಿದ ಶ್ರೀ ಸಿದ್ದಲಿಂಗ ಸ್ವಾಮೀಜಿ, ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ತಮ್ಮ ಕಾರ್ಯಕರ್ತರೊಟ್ಟಿಗೆ ತೆರಳಿ ಮಾಲರ್ಪಣೆ ಮಾಡಿ ಗೌರವ ಸಮರ್ಪಿಸಿದ್ದಾರೆ.