ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಎಸ್ಪಿ ಡಾ.ಬಿ.ಟಿ.ಕವಿತಾ ಮಾತನಾಡಿ ಚಾಮರಾಜನಗರ ಜಿಲ್ಲೆಯ ಐದು ಕಳ್ಳತನ ಪ್ರಕರಣಗಳನ್ನು ಭೇದಿಸಿಸಲಾಗಿದೆ. 70 ಗ್ರಾಂ. ಚಿನ್ನ 10 ಬೈಕ್ ಎರಡು ಕಾರು ವಶಕ್ಕೆ ಪಡೆದು 9 ಮಂದಿಯನ್ನು ಬಂಧಿಸಲಾಗಿದೆ. ಇತ್ತೀಚೆಗೆ ಹೆಚ್ಚಾಗಿದ್ದ ಮನೆ ಹಾಗೂ ವಾಹನಗಳ ಕಳ್ಳತನ ಪ್ರಕರಣಗಳು ಒಟ್ಟಾರೆ 17 ಲಕ್ಷ ರೂ ಮೌಲ್ಯದ ಚಿನ್ನ ವಾಹನ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ ಎಂದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶಶಿಧರ್, ಡಿವೈಎಸ್ಪಿ ಲಕ್ಷ್ಮಯ್ಯ, ಧರ್ಮೇಂದ್ರ ಇದ್ದರು