ತಾಲೂಕಿನ ಇತಿಹಾಸ ಪ್ರಸಿದ್ಧ ದುಬಲಗುಂಡಿ ಗ್ರಾಮದ ಗುಡ್ಡದ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮಧ್ಯಾಹ್ನ 3:30ಕ್ಕೆ ಶ್ರಾವಣ ಸಮಾಪ್ತಿ ಅಂಗವಾಗಿ ವಿಶೇಷ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿವ್ಯ ಸಾನಿಧ್ಯ ವಹಿಸಿದ್ದ ತಾಡೋಳಾ ಗುರುಕುಲ ಆಶ್ರಮದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಚಂದ್ರಶೇಖರ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜ ಭೋಜ ಗುಂಡಿ ಇದ್ದರು.