ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಂತೆ ಶುಕ್ರವಾರ ವಿಡಿಯೋ ಸಂವಾದ ಸಭೆ ನಡೆಸಿ ಮಾರ್ಗಸೂಚಿಗಳನ್ವಯ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಕುರಿತಂತೆ ಸೂಕ್ತ ರೀತಿಯಲ್ಲಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು. ನಗರದ ಡಿಸಿ ಕಚೇರಿಯ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಶುಕ್ರವಾರ ಡಿಸಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಅಧಿಕಾರಿಗಳು ವಿಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿದ್ದರು.