ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಆತ ಈ ಹಿಂದೆ ತಂಗಿದ್ದ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದ ಎಸ್ಐಟಿ ಸ್ಥಳ ಮಹಜರು ಕಾರ್ಯ ಮಾಡುತ್ತಿದೆ. ಈ ವೇಳೆ ತಿಮರೋಡಿ ಮನೆಯಲ್ಲಿದ್ದ ದೂರುದಾರನಿಗೆ ಸಂಬಂಧಿಸಿದ ವಸ್ತುಗಳೆಲ್ಲವನ್ನೂ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆಯುವ ಕಾರ್ಯ ಮಾಡುತ್ತಿದ್ದಾರೆ. ಆತ ಬಳಸುತ್ತಿದ್ದ ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ಎಸ್ಐಟಿ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.