ಕಲಬುರಗಿ : ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಕೂಡಲೇ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮಳೆಯಿಂದ ಹಾಳಾದ ತೊಗರಿ, ಉದ್ದು ಬೆಳೆಗಳನ್ನ ಹಿಡಿದು ಕಲಬುರಗಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.. ಸೆ3 ರಂದು ಬೆಳಗ್ಗೆ 11 ಗಂಟೆಗೆ ಕಲಬುರಗಿ ಡಿಸಿ ಕಚೇರಿ ಬಳಿ ವೀರ ಕನ್ನಡಿಗರ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.. ಜಿಲ್ಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿ ತೊಗರಿ, ಉದ್ದು, ಹೆಸರು, ಸೋಯಾ, ಎಳ್ಳು ಸೇರಿದಂತೆ ಅನೇಕ ಬೆಳೆಗಳು ಹಾಳಾಗಿದ್ದು, ಎಕರೆಗೆ 20 ಸಾವಿರ ರೂ ಪರಿಹಾರ ನೀಡಬೇಕೆಂದು ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ..