ಕಳೆದ ಅನೇಕ ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ರೈತರು ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಯಾದಗಿರಿ ಜಿಲ್ಲೆಯ ವಡಿಗೇರ ತಾಲೂಕಿನ ಹುಲಕಲ್ ಜೆ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿರುವ ಜಿಲ್ಲಾಧಿಕಾರಿಗಳು ಬೆಳೆ ಹಾನಿಯನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಸರಿಯಾದ ಸಮೀಕ್ಷೆ ಮಾಡಿ ವರದಿಯನ್ನು ಸಲ್ಲಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು.