ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಅಟದ ಮೈದಾನದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಗುರುಭವನ ನಿರ್ಮಾಣ ಯೋಜನೆಯನ್ನು ಕೈಬಿಟ್ಟು ಬೇರೆ ಸ್ಥಳದಲ್ಲಿ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ತಾಲೂಕು ಎಸ್‌ಎಫ್‌ಐ ಮತ್ತು ಡಿವೈಎಫ್‌ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಎ.ಸೋಮಶೇಖರ್, ಪಟ್ಟಣದಲ್ಲಿರುವ ಸರಕಾರಿ ಬಾಲಕರ ಪ್ರೌಡಶಾಲೆ,ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿದ್ದು ಮೂರು ಸಂಸ್ಥೆಗಳಿಗೆ ಇರುವ ಏಕೈಕ ಅಟದ ಮೈದಾನ ಸರಕಾರಿ ಜೂನಿಯರ್ ಕಾಲೇಜ್ ಮೈದಾನವಾಗಿದೆ ಎಂದರು.