ರಾಜ್ಯ ಲಾಟರಿ ರೆಗ್ಯೂಲೇಶನ್ ಆ್ಯಕ್ಟ್ 1998 ಮತ್ತು ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ.) ಕಾರವಾರ ರವರ ಅವರನ್ನೊಳಗೊಂಡ ಫ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ ಎಂದು ಸೋಮವಾರ ಸಂಜೆ 5ಕ್ಕೆ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಇವುಗಳ ನಿಯಂತ್ರಣಕ್ಕೆ ಫ್ಲೈಯಿಂಗ್ ಸ್ಕ್ವಾಡ್ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.