ಯಲ್ಲಾಪುರ : ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೀಗಾರ - ಭಾಗಿನಕಟ್ಟಾ ರಸ್ತೆಯ ಪಕ್ಕದಲ್ಲಿ ಭೂಕುಸಿತವಾದ ಸ್ಥಳಕ್ಕೆ ತಹಶೀಲ್ದಾರ್ ಚಂದ್ರಶೇಖರ್ ಹೊಸಮನಿ ತೆರಳಿ ಪರಿಶೀಲಿಸಿದರು. ಲೋಕೋಪಯೋಗಿ ಇಂಜಿನಿಯರ್ ಸಂಜಯ್, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.