ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ 2025-26ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಅಶೋಕ ಮನುಗುಳಿ ಸೋಮವಾರ ಸಾಯಂಕಾಲ 4ಗಂಟೆ ಸುಮಾರಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಯುವಕ ಯುವತಿಯರು ಕ್ರೀಡೆಗಳತ್ತ ಹೆಚ್ಚಿನ ಆಸಕ್ತಿ ತೋರಿಸಿ, ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳು ನಿರ್ಮಾಣವಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಅಧಿಕಾರಿಗಳು ಜನಪ್ರತಿನಿಧಿಗಳು ಭಾಗಿಯಾಗಿದ್ದರು.