ಹೊಳಲ್ಕೆರೆ:ತಾಲ್ಲೂಕಿನ ಬಿದರಕೆರೆ ಗ್ರಾಮದಲ್ಲಿ ₹1ಕೋಟಿ ವೆಚ್ಚದಲ್ಲಿ ನೂತನ ಚೆಕ್ ಡ್ಯಾo ನಿರ್ಮಾಣದ ಕಾಮಗಾರಿಗೆ ಸೋಮವಾರ ಬೆಳಿಗ್ಗೆ 11ಗಂಟೆಗೆ ಭೂಮಿ ಪೂಜೆ ನಡೆಯಿತು. ಹೊಳಲ್ಕೆರೆ ಶಾಸಕರಾದ ಎಂ. ಚಂದ್ರಪ್ಪ ಮಾತನಾಡಿ,ಭೂಮಿ ಪೂಜೆ ನೆರವೇರಿಸಿದರು ಇವಳೆ ಮಾತನಾಡಿದ ಅವರು ತಾಲೂಕಿನಲ್ಲಿ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವ ಸಲುವಾಗಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ, ಬಹು ಮುಖ್ಯವಾಗಿ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಕೆರೆ ಕಟ್ಟೆಗಳ ಅಭಿವೃದ್ಧಿ ಚೆಕ್ ಡ್ಯಾಮ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.