ಚಾಮರಾಜನಗರ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸಭೆಯನ್ನು ಶೀಘ್ರದಲ್ಲಿ ಕರೆಯುವಂತೆ ಒತ್ತಾಯಿಸಿ ಕರ್ಣಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ. ಸಾಗರ್ಬಣ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ, ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ 8, 10 ಹತ್ತು ತಿಂಗಳಿಂದಲ್ಲೂ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸಭೆಯನ್ನು ಅನೇಕ ಸಮಸ್ಯೆಗಳು ಇನ್ನೂ ಸಾಕಷ್ಟು ಬಾಕಿಯಿರುವುದರಿಂದ ತಕ್ಷಣವೇ ಸಮಸ್ಯೆ ಕರೆದು ಸಮಸ್ಯೆಗಳನ್ನು ಪರಿಹರಿಸಿಕೊಡಬೇಕು ಮನವಿಯಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷ ಒತ್ತಾಯಿಸಿದ್ದಾರೆ.