ಕೇರಳದ ವೈನಾಡು ಪ್ರದೇಶದಲ್ಲಿ ಮಳೆ ಹೆಚ್ಷಾದಂತೆ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಒಳ ಹರಿವು ಹೆಚ್ಚಾಗುತ್ತಿದೆ. ಈಗಾಗಲೇ ಜಲಾಶಯದಿಂದ 10ರಿಂದ 20 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಪ್ರಮಾಣವನ್ನು ಯಾವುದೇ ಸಂದರ್ಭದಲ್ಲಿ ಹೆಚ್ಚಿಸುವ ಸಾಧ್ಯತೆ ಇರುವುದರಿಂದ ಕಬಿನಿ ಜಲಾಶಯದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜನ ಜಾನುವಾರುಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.