ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯಿತು. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಗಣೇಶ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ ಸಾಂಸ್ಕೃತಿಕ ಇತಿಹಾಸದಲ್ಲಿ ಸ್ಮರಣೀಯ ಕ್ಷಣವಾಯಿತು. ಅಂತಿಮ ದಿನವಾದ ಇಂದು ಸಂಜೆ ಆನೆ ಅಂಬಾರಿ ಮೆರವಣಿಗೆ ಹಾಗೂ ಭವ್ಯ ವಿಸರ್ಜನೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸಾಂಸ್ಕೃತಿಕ, ನಾದಸ್ವರ, ಕಲಾ ತಂಡಗಳು ಭಕ್ತರನ್ನು ಮನರಂಜಿಸಿದವು.