ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಲ್ ಜೀವನ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯನ್ನು ಸಿಇಒ ಡಾ.ನವೀನ್ ಭಟ್ ರವೆ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.ಈ ವೇಳೆ ಜಿಲ್ಲೆಯಲ್ಲಿ ಒಟ್ಟು 27 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜಲ್ ಜೀವನ ಮಿಷನ್ ಯೋಜನೆಯ ಮನೆ ಮನೆಗೆ ಗಂಗೆ ಕಾಮಗಾರಿಯು ಇದುವರೆಗೂ ಪ್ರಾರಂಭವಾಗದಿರುವ ಕುರಿತು ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಚರ್ಚಿಸಿರು. ಇದೇ 7 ದಿನದ ಒಳಗಾಗಿ 27 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ್ ಜೀವನ ಮಿಷನ್ ಕಾಮಗಾರಿಗಳು ಪ್ರಾರಂಭವಾಗಿರುವ ಬಗ್ಗೆ ದೃಢೀಕರಣ ನೀಡುವಂತೆ ತಿಳಿಸಿದರು. ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಿಇಒ ಸೂಚಿಸಿದರು.