ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಯುವಕನೊಬ್ಬ ಕೊಲೆಯಾದ ಘಟನೆ ಬೆಳಕಿಗೆ ಬಂದಿದೆ. ಅಟೋ ಚಾಲಕನಾಗಿದ್ದ ಅಬ್ರಾರ್ ಅಹ್ಮದ್ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಕಳೆದ ಮೂರು ತಿಂಗಳ ಹಿಂದೆ ಆರೋಪಿಯೊಬ್ಬ ಅಬ್ರಾರ್ ಅಹ್ಮದ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಯುವಕನನ್ನು ಬೆಂಗಳೂರು ಹಾಗೂ ಸೇಡಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಯುವಕ ಮೃತಪಟ್ಟಿದ್ದಾನೆ. ಈ ನಡುವೆ, ಕೊಲೆಯ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಕೊಲೆಗೆ ನಿಖರವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ. ಈ ಕುರಿತು ಮೃತನ ಕುಟುಂಬಸ್ಥರು ಹಾಗೂ ಸಮುದಾಯದವರು ಪಟ್ಟ