ಯಾದಗಿರಿ ಜಿಲ್ಲೆಯ ವಡಿಗೇರ ಪಟ್ಟಣದ ತಾಲೂಕ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಶಾಸಕ ಚನ್ನ ರೆಡ್ಡಿ ಪಾಟೀಲ್ ತುನ್ನೂರ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ವಿವಿಧ 20ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಯಾವುದೇ ಕಾಮಗಾರಿಗಳನ್ನು ತಡ ಮಾಡದೆ ನಿಗದಿತ ಅವಧಿಯಲ್ಲಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.