ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿಯನ್ನು ಎಡಗೈ ಮತ್ತು ಬಲಗೈ ಸಮುದಾಯಗಳು ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಕಿವಿ ಮಾತು ಹೇಳಿದರು. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಶಾಸಕರ ನಿವಾಸದ ಬಳಿ ಭಾನುವಾರ ಛಲವಾದಿ ಸಮಾಜ ದಿಂದ ಒಳಮೀಸಲಾತಿ ಜಾರಿಗೊಂಡ ಹಿನ್ನೆಲೆ ಸಿಹಿ ಪಡೆದು, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹಲವಾರು ದಶಕಗಳಿಂದ ಎಸ್ ಸಿ ಪಟ್ಟಿಯಲ್ಲಿ 101 ಜಾತಿಗಳ ಪೈಕಿ, ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿರುವ ಶೋಷಿತ ಸಮುದಾಯಗಳಲ್ಲಿ ಮಾದಿಗ ಮತ್ತು ಛಲವಾದಿ ಸಮಾಜಕ್ಕೆ ಒಳಮೀಸಲಾತಿ ಜಾರಿಯಿಂದ ಹೆಚ್ಚು ಅನುಕೂಲವಾಗಲಿದೆ. ಅಂಬೇಡ್ಕರ್ ಅವರ ಸಂವಿಧಾನದಿAದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಸ್ ಟಿ ಮೀಸಲು ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾಗಿರುವೆ ಎಂದರು.