ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆಗಸ್ಟ್ 23 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದೆ. ಮೊದಲ ಹಂತದಲ್ಲಿ ವಿದ್ಯುತ್ ಮೀಟರ್ ರೀಡರ್ ಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದು, ಜಿಲ್ಲೆಯ ಎಲ್ಲ ಜನತೆ ಸಮೀಕ್ಷೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.