ಹಳಿಯಾಳ : ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಆಶ್ರಯ ಸಮಿತಿ ಸಭೆ ಜರುಗಿತು. ಸಭೆಯಲ್ಲಿ ಹಳಿಯಾಳ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ಯೋಜನೆಗಳ ಕುರಿತು ಹಾಗೂ ನಿವೇಶನಗಳ ಸಮಸ್ಯೆ ಬಗ್ಗೆ ವಸತಿ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ಆರ್.ವಿ.ದೇಶಪಾಂಡೆಯವರು ನೀಡಿದರು. ಸಭೆಯಲ್ಲಿ ಪುರಸಭೆ ಅಧ್ಯಕ್ಷರು, ತಹಶೀಲ್ದಾರ್, ಪುರಸಭೆಯ ಮುಖ್ಯಾಧಿಕಾರಿಗಳು, ಆಶ್ರಯ ಸಮಿತಿ ಸದಸ್ಯರು ಮತ್ತು ವಸತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.