ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೆಪ್ಟೆಂಬರ್ 5ರಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬಳಿ ಮಾತನಾಡಿದ ಅವರು 'ಅನೇಕ ದೇಶಗಳು ಇವಿಎಂ ಬಳಸಿ, ನಂತರ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿವೆ' ಎಂದರು. ಅಲ್ಲದೆ ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿರುವುದರ ಕುರಿತು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿಯವರು ಸಹ ಪೋಲೀಸಿನವರೇ' ಎಂದರು.