ಹನೂರು :ತಾಲೂಕಿನ ಅಜ್ಜೀಪುರ ಹಾಗೂ ಸೂಳೇರಿಪಾಳ್ಯ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯಿಂದ ಕೂಲಿ ಕೆಲಸಕ್ಕಾಗಿ ಬಂದ ಕುಟುಂಬಗಳ ಮಕ್ಕಳು ಶಾಲೆಗೆ ಗೈರುಹಾಜರಾಗಿ ಕಬ್ಬು ಕಟಾವಿನಲ್ಲಿ ತೊಡಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪೋಷಕರಿಗೆ ಶಿಕ್ಷಣದ ಮಹತ್ವ ತಿಳಿಸಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವೊಲಿಸಿದ್ದಾರೆ ಕಳೆದ 20 ದಿನಗಳಿಂದ ಅಜ್ಜೀಪುರ ಗ್ರಾಪಂ ವ್ಯಾಪ್ತಿಯ ಜಮೀನುಗಳಲ್ಲಿ ನಡೆಯುತ್ತಿರುವ ಕಬ್ಬು ಕಟಾವಿಗೆ ವಿಜಯಪುರ ಜಿಲ್ಲೆಯಿಂದ ಹತ್ತಾರು ಕೂಲಿ ಕುಟುಂಬಗಳು ಬಂದು ತಾತ್ಕಾಲಿಕವಾಗಿ ತಂಗಿದ್ದರು. ಇವರೊಂದಿಗೆ ಶಾಲಾ ವಿದ್ಯಾರ್ಥಿಗಳು ಕೂಡ ಪೋಷಕರಿಗೆ ಸಹಾಯ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಅರಿತು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಂಡಿದ್ದಾರೆ