ಹೆಚ್ಚಿನ ದಿನಗಳಲ್ಲಿ ಯುವ ಜನತೆ ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಯುವಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದಾಗಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ಇರುವ ಜೂನಿಯರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ವಿರೋಧಿ ಹಾಗೂ ಜಾಗೃತಿ ಅಭಿಯಾನವನ್ನು ನಡೆಸಲಾಯಿತು.