ಪೌಷ್ಟಿಕ ಆಹಾರ ಸೇವನೆ ಮಾಡುವುದರಿಂದ ಮನುಷ್ಯನಿಗೆ ಉತ್ತಮ ಆರೋಗ್ಯ ವೃದ್ಧಿಯಾಗಲಿದೆ. ಇಲ್ಲದಿದ್ದರೆ ದೇಹ ನಿಶ್ಯಕ್ತಿ ಹೊಂದುವ ಜೊತೆಗೆ ಅನಾರೋಗ್ಯಕ್ಕೆ ಅನಾರೋಗ್ಯಕ್ಕೀಡಾಗುತ್ತದೆ ಎಂದು ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಧೀಶೆ ಎನ್.ವಿ.ಭವಾನಿ ಅಭಿಪ್ರಾಯಪಟ್ಟರು.ಪಟ್ಟಣದ ದೇವರಾಜು ಅರಸು ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು