ಮೈಷುಗರ್ ಕಾರ್ಖಾನೆ ನಿವೃತ್ತ ನೌಕರನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ನಗರದ ಮಿಮ್ಸ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಲಿವಾನ ಗ್ರಾಮದ ನಿವಾಸಿ ಮಹಾದೇವಸ್ವಾಮಿ ಆತ್ಮಹತ್ಯೆ ಯತ್ನಿಸಿದವರು. ಈ ಕುರಿತು ಕೆರಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ 10 ವರ್ಷದ ಹಿಂದೆ ಮೈಷುಗರ್ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ಇದುವರೆಗೂ ನಿವೃತ್ತಿ ಹಣ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಲೈವ್ ವಿಡಿಯೊ ಮಾಡಿ ಆತ್ಮಹತ್ಯೆ ಯತ್ನಿಸಿದ್ದಾರೆ. ಬುಧವಾರ ಸಂಜೆ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು, ಮಹಾದೇವಸ್ವಾಮಿ ಅವರ ಪತ್ನಿ, ಪುತ್ರಿ ಭೇಟಿ ಮಾಡಿ ಸಂತ್ವಾನ ಹೇಳಿದರು. ಇಂತಹ ಘಟನೆ ನಡೆಯಬಾರದಿತ್ತು ಎಂದರು.