ನಗರದಲ್ಲಿ ಪಿಪಿಪಿ ಮಾದರೀಯ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿರೋಧಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಸಂಸದ ರಮೇಶ ಜಿಗಜಿಣಗಿ ಭಾಗವಹಿಸಿ ಬೆಂಬಲ ಸೂಚಿಸಿದರು. ನಾನು ಕೂಡಾ ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕು ಎಂದು ಬೇಡಕೆ ಇಡುವೆ ಯಾವುದೇ ಕಾರಣಕ್ಕೂ ಪಿಪಿಪಿ ಮಾದರಿಯ ಕಾಲೇಜು ಬೇಡಾ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ಸೇರಿದಂತೆ ಹಲವರಿದ್ದರು.