ಮಳವಳ್ಳಿ : ಮಳವಳ್ಳಿ ತಾಲ್ಲೂಕು ಟಿಎಪಿಸಿಎಂಎಸ್ 2024-25ನೇ ಸಾಲಿನಲ್ಲಿ 18.17 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಟಿ.ಸಿ.ಚೌಡಯ್ಯ ತಿಳಿಸಿದ್ದಾರೆ. ಮಳವಳ್ಳಿ ಪಟ್ಟಣದ ರೈತ ಭವನ ಮುಂಭಾಗ ಗುರುವಾರ ಸಾಯಂಕಾಲ 4.30ರ ಸಮಯದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರೈತರಿಗೆ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ತಾಲ್ಲೂಕು ಟಿಎಪಿಸಿಎಂಎಸ್ ಪ್ರಾಮಾಣಿಕವಾಗಿ ಸೇವೆ ಸಲ್ಲಿಸು ತ್ತಾ ಬಂದಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸು ವುದು ಸೇರಿದಂತೆ ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡಿ ಕೊಂಡು ಬರುತ್ತಿದೆ ಹಾಗೂ ರೈತರು ಹಾಗೂ ಸದಸ್ಯರಿಗೆ ಸರ್ಕಾರದ ಸವಲತ್ತುಗಳನ್ನು ಸಮ ರ್ಪಕವಾಗಿ ಪೂರೈಸುತ್ತಿದೆ ಎಂದರು.