ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಕಾವೇರಿ ನಿವಾಸದಲ್ಲಿ ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಸುದೀರ್ಘ ಸಭೆ ನಡೆಸಿ ಅವರ ಬೇಡಿಕೆಗಳು ಮತ್ತು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಪ್ರತಿ ಜಿಲ್ಲಾ ವ್ಯಾಪ್ತಿಯಲ್ಲಿ ಅಲೆಮಾರಿ ಜನಾಂಗದ ಮೇಲೆ ಆಗುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.