ಒಳ ಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಸಂಜೆ 4 ಗಂಟೆಗೆ ದಸಂಸ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ನೇತೃತ್ವದಲ್ಲಿ ಪರಿಶಿಷ್ಟ ಜಾತಿ 59, ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳ ಮೀಸಲಾತಿ ವಂಚಿತ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯ್ತು. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ವರದಿ ಅನುಸಾರ ಪರಿಶಿಷ್ಟ ಜಾತಿಯೊಳಗಿನ ಒಳ ಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.