ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 28ರಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಮಧ್ಯಾಹ್ನ 4 ಗಂಟೆಗೆ ನಡೆದ ಸಭೆಯಲ್ಲಿ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37 ಲಕ್ಷ ರೈತರಿಗೆ 28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8.6 ಲಕ್ಷ ರೈತರಿಗೆ ಸಾಲ ವಿತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.