ಚೆಂಬು ಗ್ರಾಮದ ಆನ್ಯಾಳದಲ್ಲಿ ಇಂದು ಚಂಬು ವಲಯ ಕಾಂಗ್ರೆಸ್ ಸಮಿತಿ ಸಭೆ ನಡೆಯಿತು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರವಿರಾಜ್ ಅಧ್ಯಕ್ಷತೆ ವಹಿಸಿದ ಸಭೆಯಲ್ಲಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ಟಿ ಪಿ. ರಮೇಶ ರವರು, ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ವಾಸು ರೈ, ಶ್ರೀಧರ್ ಮತ್ತಿತರ ಪ್ರಮುಖರು ಭಾಗವಹಿಸಿದರು. ಮುಖಂಡರ ಎದುರು ಸ್ಥಳೀಯ ಕಾರ್ಯಕರ್ತರು ತಮ್ಮ ಅಹವಾಲುಗಳನ್ನು ಹೇಳಿಕೊಂಡರು.ಟಿಪಿ ರಮೇಶ್ ರವರು ಮಾತನಾಡಿ, ಕಾರ್ಯಕರ್ತರ ಅಹಮಲುಗಳನ್ನು ಮತ್ತು ನಡೆಯಬೇಕಿರುವ ಕಾಮಗಾರಿಗಳನ್ನು ಶಾಸಕರು ಹಾಗೂ ಜಿಲ್ಲಾ ಅಧ್ಯಕ್ಷರ ಗಮನಕ್ಕೆ ತರುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಮುಂಬರುವ ಚುನಾವಣೆಗಳಲ