ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಸೆಪ್ಟೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಝರೀಫ ಬಾನು ಬುಧವಾರ ತಿಳಿಸಿದರು. ಶಿರಾ ನ್ಯಾಯಾಲಯದಲ್ಲಿ ಸುಮಾರು 10 ಸಾವಿರ ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ 2 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಗುರುತಿಸಲಾಗಿದೆ. ಈ ಲೋಕ ಅದಾಲತ್‌ನ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಅವರು ಕರೆ ನೀಡಿದ್ದಾರೆ.