ಧರ್ಮಸ್ಥಳದ ವಿರುದ್ದ ಅಪಪ್ರಚಾರ ಖಂಡಿಸಿ ಕೊಡಗಿನ ವೀರಾಜಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಕೊಡಗು ಮೈಸೂರು ಸಂಸದ ಯಧುವೀರ್, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿ ಪ್ರಕರಣವನ್ನು NIA ತನಿಖೆಗೆ ವಹಿಸುವಂತೆ ಆಗ್ರಹಿಸಿದರು. ವಿರಾಜಪೇಟೆ ಗಡಿಯಾರ ಕಂಬದ ಬಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧರ್ಮಸ್ಥಳದ ಪರ ಘೋಷಣೆ ಕೂಗಿದ್ದರಲ್ಲದೆ, ಸರಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸೂಕ್ತ ತನಿಖೆಗೆ ಆಗ್ರಹಿಸಿ ವಿರಾಜಪೇಟೆ ತಹಶೀಲ್ದಾರರಿಗೆ ಬಿಜೆಪಿ ನಾಯಕರು ಮನವಿ ಸಲ್ಲಿಸಿದರು.