ಕಂಪ್ಲಿ ನಗರದಲ್ಲಿ ಸೆಪ್ಟೆಂಬರ್ 13,ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ಹಳ್ಳದಂತೆಯೇ ನೀರು ಹರಿಯಿತು.ನಗರದ ಹಲವು ಚರಂಡಿಗಳು ತುಂಬಿ ಹರಿಯುತ್ತಿದ್ದರಿಂದ ಕೆಲ ಪ್ರಮುಖ ರಸ್ತೆಗಳಲ್ಲಿ ನದಿಯಂತೆಯೇ ನೀರು ಹರಿದು ಸಂಚಾರ ಅಸ್ತವ್ಯಸ್ತಗೊಂಡಿದೆ. ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದರು.ಮಳೆ ಮುಂದುವರೆದರೆ ನಗರದಲ್ಲಿ ಇನ್ನಷ್ಟು ಸಮಸ್ಯೆಗಳು ಎದುರಾಗುವ ಸಾಧ್ಯತೆ ವ್ಯಕ್ತವಾಗಿದೆ.