ಶಿಡ್ಲಘಟ್ಟ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ ಹಿಡಿದಿದ್ದು ಸಮಿತಿಯ ಮೊದಲ ಸಭೆಗೆ ಆರಂಭದಲ್ಲಿಯೆ ವಿಘ್ನ ಎದುರಾಗಿದೆ. ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸಭೆ ಆರಂಭವಾದ ಹತ್ತೇ ಹತ್ತು ನಿಮಿಷಕ್ಕೆ ಸಭೆ ದಿಢೀರ್ ರದ್ದಾಗಿ ಬಂದ ದಾರಿಗೆ ಸುಂಕ ಇಲ್ಲ ಎಂಬAತೆ ಸಮಿತಿ ಸದಸ್ಯರು ವಾಪಸ್ಸಾದರು.