ಮೊಳಕಾಲ್ಮುರು:-ಶಾಲಾ ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಹೊರತರಲು ಶ್ರಮಿಸಿರುವ ಶಿಕ್ಷಕರು ಹಾಗೂ ಪೋಷಕರ ಕಾಳಜಿಯು ಶ್ಲಾಘನೀಯ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು. ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಸೋಮವಾರ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಗಾಯಿತ್ರಿ ಹಿರಿಯ ಪ್ರಾಥಮಿಕ ಶಾಲೆಯ ಮಹಿಳಾ ಸೇವಾ ಸಮಾಜ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.