ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು ಲಭಿಸಿದರೂ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸರು ಆತನ ಮನೆಗೆ ನೋಟಿಸ್ ಅಂಟಿಸಿ ಬಂದಿದ್ದಾರೆ. ಸಮೀರ ಎಂ.ಡಿ. ಕೋರ್ಟ್‌ಗೆ ನೀಡಿದ ವಿಳಾಸ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಶುಕ್ರವಾರ ಸಂಜೆ 5ಗಂಟೆಗೆ ನೋಟಿಸ್ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಇ- ಮೇಲ್ ಹಾಗೂ ಮೊಬೈಲ್ ನಂಬರ್‌ಗೆ ಸಂಪರ್ಕ ಮಾಡಿದರೂ ಯಾವುದೇ ಉತ್ತರ ಬಂದಿಲ್ಲ ಎನ್ನಲಾಗಿದೆ. ನೋಟಿಸ್‌ನಲ್ಲಿ ಆ. 24ರಂದು ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ