ಮಾರಲಭಾವಿ ಗ್ರಾಮದ ರಸ್ತೆ ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿದ್ಯಾರ್ಥಿಗಳಿಂದ ಮನವಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾರಲಬಾವಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿರುವ ತಗ್ಗು ಗುಂಡಿಗಳನ್ನು ಮತ್ತು ಜಾಲಿ ಕಂಟಿಗಳನ್ನು ತೆರವುಗೊಳಿಸಿ ಗ್ರಾಮಕ್ಕೆ ಬರುವ ಬಸ್ ಗಳಿಗೆ ಸುಗಮ ರಸ್ತೆ ಮಾಡುವಂತೆ ಗ್ರಾಮದ ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹಲವು ದಿನಗಳಿಂದ ಗ್ರಾಮಕ್ಕೆ ಬಸ್ ಬರದೇ ಇರುವ ಕಾರಣ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ತುಂಬಾ ತೊಂದರೆಯಾಗುತ್ತಿದ್ದು ಕೊಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಸರಿಪಡಿಸುವಂತೆ ಮನವಿ ಮಾಡಿಕೊಂಡರ